Index   ವಚನ - 1502    Search  
 
ವಿಚಾರವೆಂಬುದು ಸಂದೇಹಕ್ಕೊಳಗು ನೋಡಾ. ವಿಚಾರಿಸುವನ್ನಕ್ಕರ ನೀನಾರೆಂಬುದನೆತ್ತ ಬಲ್ಲೆ? ಮರುಳೆ ವಾಙ್ಮನೋತೀತವಾದ ಘನವು ವಿಚಾರಕ್ಕೆ ನಿಲುಕುವುದೆ? ಗುಹೇಶ್ವರನೆಂಬ ಲಿಂಗವು ತನ್ನ ತಿಳಿದು ನೋಡಿಹೆನೆಂಬವರ[ನು] ವಿಚಾರವೆಂಬ ಬಲೆಯಲ್ಲಿ ಕೆಡಹಿದನು.