Index   ವಚನ - 1506    Search  
 
ವೇದಂಗಳೆಂಬವು ಬ್ರಹ್ಮನ ಬೂತಾಟ. ಶಾಸ್ತ್ರಂಗಳೆಂಬವು ಸರಸ್ವತಿಯ ಗೊಡ್ಡಾಟ. ಆಗಮಗಳೆಂಬವು ಋಷಿಯ ಮರುಳಾಟ. ಪುರಾಣಗಳೆಂಬವು ಪೂರ್ವದವರ ಗೊಡ್ಡಾಟ ಇಂತಿವನರಿದವರ ನೇತಿಗಳೆದು ನಿಜದಲ್ಲಿ ನಿಂದಿಪ್ಪಾತನೆ ಗುಹೇಶ್ವರನಲ್ಲಿ ಅಚ್ಚಲಿಂಗೈಕ್ಯನು!