Index   ವಚನ - 5    Search  
 
ಕೈದು ಮೊನೆ ಏರುವದಕ್ಕೆ ಮೊದಲೇ ಕಟ್ಟಬಲ್ಲಡೆ ಕೈದೇನ ಮಾಡುವುದು? ಹಾವು ಬಾಯಿ ಬಿಡುವುದಕ್ಕೆ ಮೊದಲೇ ಹಿಡಿದ ಮತ್ತೆ ವಿಷವೇನ ಮಾಡುವುದು? ಮನ ವಿಕಾರಿಸುವುದಕ್ಕೆ ಮೊದಲೇ ಮಹದಲ್ಲಿ ನಿಂದ ಮತ್ತೆ ಇಂದ್ರಿಯಂಗಳೇನ ಮಾಡಲಾಪವು, ಜಾಂಬೇಶ್ವರಾ?