Index   ವಚನ - 7    Search  
 
ಆತ್ಮ ನಿಸ್ಸಂಗತ್ವದ ಇರವು: ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚತತ್ವದ ಮಧ್ಯದಲ್ಲಿ ಪುದಿದಿಪ್ಪ ಆತ್ಮನ ಒಡೆಯನನರಿವಾಗ, ಪೃಥ್ವಿ ಪೃಥ್ವಿಯ ಕೂಡಿತ್ತು, ಅಪ್ಪು ಅಪ್ಪುವ ಕೂಡಿತ್ತು. ತೇಜ ತೇಜವ ಕೂಡಿತ್ತು, ವಾಯು ವಾಯುವ ಕೂಡಿತ್ತು. ಆಕಾಶ ಆಕಾಶವ ಕೂಡಿತ್ತು. ಆ ಪಂಚತತ್ವವು ಒಂದರೊಳಗೊಂದು ಕೂಡಿದಲ್ಲಿ, ಆತ್ಮನ ಪಾಪ ಪುಣ್ಯವಾವುದು? ಬೇರೊಂದು ಠಾವಿನಲ್ಲಿ ನಿಂದು ಅರಿವ ತೆರನಾವುದು? ಅದರ ಕುರುಹು ಕೇಳಿಹರೆಂದು ಅಲೇಖನಾದ ಶೂನ್ಯ ಕಲ್ಲಿನ ಮರೆಯಾದೆಯಲ್ಲಾ!