Index   ವಚನ - 9    Search  
 
ಆರೈದು ಕಾಣುವುದಕ್ಕೆ ಸ್ಥಾಣು ಕರ್ತನಲ್ಲ. ನೋಯಿಸದೆ ಕಾಬುದಕ್ಕೆ ಆರಡಿಯಲ್ಲ. ನೋಯದೆ ಕೊಂಬುದಕ್ಕೆ ಪಿಪೀಲಿಕನಲ್ಲ, ಬಂಧಿಸಿ ಕಾಬುದಕ್ಕೆ ಚಂದನ ಶಿಲೆಯಲ್ಲ. ಭಕ್ತಿಯೆಂಬ ಅಂಗದ ಸತಿ ನಾನಾಗಿ, ವಿರಕ್ತಿಯೆಂಬ ಘನಲಿಂಗದ ಕೂಟಪುರುಷ ನೀನಾಗಿ, ಇಂತೀ ಉಭಯದಿಂದ ಒದಗಿದ ರೂಪು ನಾಮವ ಏನೆಂಬೆ? ಅಲೇಖನಾದ ಶೂನ್ಯ ಕಲ್ಲಿನ ಹಂಗು ಬಿಡು, ಬೇಡಿಕೊಂಬೆ.