ಊರ್ಧ್ವ ಭೂಮಿಯ ವಿರಾಗದಲ್ಲಿ ಸಪ್ತಸಮುದ್ರಕ್ಕೆ ಭೂಮಿ ಒಂದೆ.
ಭೂಮಿಯ ಮಧ್ಯದಲ್ಲಿ ಒಂದು ವಟವೃಕ್ಷ ಹುಟ್ಟಿತ್ತು.
ಕೊಂಬು ಮೂರು, ಅದರ ಬೆಂಬಳಿಯಲ್ಲಿ ಹುಟ್ಟಿದ ಕವಲಿಗೆ ಲೆಕ್ಕವಿಲ್ಲ.
ಆ ಆಲದ ಹಣ್ಣಿಂಗೆ ಮೋನದ ಹಕ್ಕಿ ಈರೇಳುಕೋಟಿ ಕೂಡಿ,
ಎಂಬತ್ತುನಾಲ್ಕು ಲಕ್ಷ ಬೇಟೆಕಾರರ ಬಲೆಯೊಳಗಾಯಿತ್ತು.
ಇದರ ಒಲವರವ ಕೇಳಿಹರೆಂದು,
ಅಲೇಖಮಯನಾದ ಶೂನ್ಯ ಕಲ್ಲಿನ ನಿಳಯದೊಳಗಾದ.