Index   ವಚನ - 23    Search  
 
ಕಾಳಮೇಘಮಂದಿರದ ಜಾಳಾಂಧರದ ಮನೆಯಲ್ಲಿ ಒಬ್ಬ ಸೂಳೆಯ ಬಾಗಿಲಲ್ಲಿ ಎಂಬತ್ತನಾಲ್ಕು ಲಕ್ಷ ಮಿಂಡಗಾರರು. ಅವಳ ಸಂಗದಲ್ಲಿ ಇರಲಮ್ಮರು, ಅವಳು ತಾವೇ ಬರಲೆಂದು ಕರೆಯದಿಹಳು. ಅವಳಿಗೆ ಯೋನಿ ಹಿಂದು, ಅಂಡ ಮುಂದು, ಕಣ್ಣು ಅಂಗಾಲಿನಲ್ಲಿ, ತಲೆ ಮುಂಗಾಲಿನಲ್ಲಿ, ಕಿವಿ ಭುಜದಲ್ಲಿ, ಕೈ ಮಂಡೆಯ ಮೇಲೆ, ಮೂಗು ಹಣೆಯಲ್ಲಿ, ಮೂಗಿನ ದ್ವಾರ ಉಂಗುಷ್ಠದಲ್ಲಿ, ಬಸುರು ಬಾಯಲ್ಲಿ, ನಡೆವಳು ತಲೆ ಮುಂತಾಗಿ, ಕಾಲು ಮೇಲಾಗಿ. ಅವಳ ಕೂಡುವ ಪರಿಯ ಹೇಳಾ, ಅಲೇಖನಾದ ಶೂನ್ಯ ಗೆದ್ದೆಯಲ್ಲಾ, ಕಲ್ಲಿನ ಹೊಟ್ಟೆಯ ಮರೆಯಲ್ಲಿ.