Index   ವಚನ - 27    Search  
 
ಟಿಪ್ಪಣವ ಬರೆದ ಚಿತ್ರಜ್ಞನು ಆ ಘಟಕ್ಕೆ ಅಸುವ ಆಶ್ರಯಿಸಬಲ್ಲನೆ? ಶಿಲ್ಪನ ಶಿಲೆ ಲೋಹ ಮೊದಲಾಗಿ ಕುರುಹುಗೊಂಡವ ದೇವತಾಕಳೆಯ ತುಂಬುವನೆ? ಶಿಲೆ ಲೋಹ ಲಕ್ಷಣವ ನೆಲೆ ಶುದ್ಧವ ಮಾಡುವನಲ್ಲದೆ. ತಾ ಕಟ್ಟುವ ಇಷ್ಟಕ್ಕೆ ಕಟ್ಟಿಲ್ಲ, ಮೇಲೆ ರೊಕ್ಕವ ತಾಯೆಂಬವಳಂತೆ ಕಟ್ಟಿಹೋದ ಮನವ ಇಷ್ಟದಲ್ಲಿ ನೆಮ್ಮಿಸದೆ. ಇನ್ನಾರ ಕೇಳುವೆ? ನೀ ಅಲೇಖಮಯ ಶೂನ್ಯ ಕಲ್ಲಿನ ಮರೆಯಾದೆ.