Index   ವಚನ - 40    Search  
 
ಪೃಥ್ವಿ ಆಕಾಶದ ಮಧ್ಯದಲ್ಲಿ ಖೇಚರ ಮಂಡಲ: ಆ ಮಂಡಲದರಸು ವಿಹಂಗರಾಜ, ಮರೀಚಿಕ ಪ್ರಧಾನ, ಮಹೀತಳ ತಳವಾರ, ಇಂತೀ ಮಂಡಲ ಸುರಕ್ಷದಲ್ಲಿ ಇರುತಿರಲಾಗಿ, ಗೋರಕ್ಷನೆಂಬ ಅರಸು ಮುತ್ತಿದ ಮಂಡಲವ. ಪಟ್ಟಣ ಕೋಳುಹೋಗದು, ಮುತ್ತಿದರಸು ಬಿಟ್ಟುಹೋಗ. ಇದ ಸಂತೈಸಲಂಜಿ, ಅಲೇಖಮಯನಾದ ಶೂನ್ಯ ಕಲ್ಲಿನೊಳಹೊಕ್ಕು, ಎಲ್ಲರ ಗೆದ್ದ.