ಬ್ರಹ್ಮಮೂರ್ತಿಗೂ ಶಿಲೆ ಒಂದೆ,
ವಿಷ್ಣು ಮೂರ್ತಿಗೂ ಶಿಲೆ ಒಂದೆ,
ರುದ್ರಮೂರ್ತಿಗೂ ಶಿಲೆ ಒಂದೆ,
ರೂಪಿನ ಅವತಾರ ಭಿನ್ನವಾಯಿತ್ತು,
ಸ್ಥೂಲ ಸೂಕ್ಷ್ಮ ಕಾರಣದಂತೆ, ಕುಂಭ ಜಲ ಬಿಂಬದಂತೆ,
ಇನ್ನಾರನಹುದೆಂಬೆ, ಇನ್ನಾರನಲ್ಲಾ ಎಂಬೆ?
ಬ್ರಹ್ಮ ಕಾಲು, ವಿಷ್ಣು ಕೈ, ರುದ್ರ ಕಣ್ಣು, ಈಶ್ವರ ತಲೆ,
ಸದಾಶಿವ ಪ್ರಾಣವಾದಲ್ಲಿ ಇವು ಸಮಯ.
ಈ ಪಂಚಕೋಶಕ್ಕೆ ಆಧಾರ ಪರಮಜ್ಞಾನ.
ಅದ ಭೇದಿಸಲರಿಯದೆ ವಾದವ ಮಾಡಿದರೆಲ್ಲರು.
ನಾದ ಬಿಂದು ಕಳೆ ಅತೀತನರಿ,
ಅಲೇಖನಾದ ಶೂನ್ಯ ಕಲ್ಲಿನೊಳಗಾದವನ.