Index   ವಚನ - 54    Search  
 
ವಾಸನೆ ವೆಗ್ಗಳದ ಕುಸುಮವ, ಅದ ಲೇಸ ಕಂಡು ವಾಸಿಸಿದಡೆ ಸುಖವಲ್ಲದೆ, ಅದ ಘಾಸಿ ಎಸೆದಡೆ ಅದೇತರ ಗಂಧ? ನಾತದ ಕೂಟ. ಭಕ್ತನ ಪೂಜೆಯ ಗುರುವಿನ ಯುಕ್ತಿ, ಇಷ್ಟನರಿತಡೆ ಆತನಿರವು, ತತ್ವದ ಭಿತ್ತಿ, ಅಲೇಖನಾದ ಶೂನ್ಯ ಕಲ್ಲಿನ ಮೆಲ್ಲೆದೆಯಾಗದಿರಯ್ಯಾ.