Index   ವಚನ - 59    Search  
 
ಸಾಸಿವೆಯ ಹಾಲು ಸಾಧಕಾಂಗರ ನಾಸಿಕದ ನೀರ ಬರಿಸಿತ್ತು. ಮೂಷಕನ ಮೀಸೆಯ ಬಿಂದು ಮೂರುಲೋಕವ ಮುಣುಗಿಸಿತ್ತು. ಕಾಸದ ನೀರು ಬಿಸಿಯಾಗಿ ಕುಡಿವರ ಮೀಸೆ ಸುಟ್ಟಿತ್ತು. ಸಾಸಿವೆಯ ಮೂಷಕನ ಮೀಸೆಯ ಬಿಸಿನೀರ ಕುಡಿವಾತನ, ಬಾಯೊತ್ತಿನ ಮೀಸೆಯಲ್ಲಿ ಹುಟ್ಟಿತ್ತು ಒಂದು ಹಾಸರೆಗಲ್ಲು. ಹಾಸರೆಗಲ್ಲಿನ ಮೇಲೆ ಕುಳಿತಿದ್ದಾತನ ಕೇಳಿಹರೆಂದು ಏತಕ್ಕಡಗಿದೆ, ಅಲೇಖಮಯ ಶೂನ್ಯ ಕಲ್ಲಿನ ಮನೆಯೊಳಗೆ.