ಸಿರಿಯ ಭೂಮಿಯ ಮಧ್ಯದಲ್ಲಿ ಉರಿಯ ಮಡು ಹುಟ್ಟಿತ್ತು.
ಆ ಮಡುವಿನ ಮಧ್ಯದಲ್ಲಿ ಐದು ಸರಗೂಡಿದ ಬಾವಿ.
ಆ ಬಾವಿಯೊಳಗೆ ಮೂರು ಮುಖದ ಹುಲಿ ಹುಟ್ಟಿತ್ತು.
ಒಂದು ಕೊಂದು ತಿಂಬುದು, ಒಂದು ಕೊಲ್ಲದೆ ತಿಂಬುದು,
ಒಂದು ಎಲ್ಲರ ನೋಡಿ ತಿಂಬುದು, ಅಲ್ಲಾ ಎಂಬುದು,
ಹುಲಿಯ ಬಣ್ಣ ಮೊದಲು ಕಪ್ಪು, ನಡುವೆ ಭಾಸುರ,
ತುದಿಯಲ್ಲಿ ಬಿಳಿದು.
ಹಗೆವಣ್ಣ ಸಹಿತಾಗಿ ಹುಟ್ಟಿದ ಹುಲಿ,
ಉರಿಯ ಮಡುವನೀಂಟಿ, ಸರಬಾವಿಯ ಕುಡಿದು,
ತಿಂಬವೆರಡು ಮುಖ ತಿನ್ನದ ಮುಖದಲ್ಲಿ ಅಡಗಿ,
ಕಡೆ ಕಪ್ಪು, ನಡುವಣ ಭಾಸುರ,
ತುದಿಯ ಬಿಳುಪಿನಲ್ಲಿ ಅಡಗಿ ಒಡಗೂಡಿತ್ತು.
ಅದರ ತೊಡಿಗೆಯ ಕೇಳಿಹರೆಂದಂಜಿ,
ಅಡಗಿದೆಯಾ, ಅಲೇಖನಾದ ಶೂನ್ಯ ಕಲ್ಲಿನೊಳಗಾಗಿ?