Index   ವಚನ - 64    Search  
 
ಹುಟ್ಟಿಸುವವ ಪೃಥ್ವಿಗೆ ಹಂಗಾದ, ಬೆಳೆಯಿಸುವವ ಅಪ್ಪುವಿಗೆ ಹಂಗಾದ. ಕೊಯಿಸುವವ ಕಾಲಗೆ ಹಂಗಾದ, ನಿನ್ನನರಿತೆಹೆನೆಂಬವ ಶಿಲೆಗೆ ಹಂಗಾದ. ಇವರೆಲ್ಲರ ಹಂಗಿಗೆ ಹರುಹ ಕೇಳಿಹರೆಂದಂಜಿ, ಅಲೇಖಮಯನಾದ ಶೂನ್ಯ ಕಲ್ಲಿನ ಮರೆಯಾದೆಯಾ?