Index   ವಚನ - 7    Search  
 
ಪ್ರಥಮಪಾದದಲ್ಲಿ ಓಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು 'ಓಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅಥರ್ವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಭೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.