ವಚನ - 1523     
 
ಶ್ರೀಗುರು ಲಿಂಗ ಜಂಗಮದ ಕರುಣ ಕಟಾಕ್ಷೆಯಿಂದ ದಶವಿಧ ಲಿಂಗಂಗಳ ಪಡೆದು ಆ ಲಿಂಗನಿಷ್ಠಾಪರತ್ವದಿಂದ, ನಿನ್ನ ಪ್ರಾಣನ ಮಧ್ಯದಲ್ಲಿ ನೆಲಸಿರ್ಪ ದಶವಿಧ ಚಿದ್ವಾಯುಗಳು, ದಶವಿಧ ಸುನಾದಗಳು, ದಶವಿಧಸತ್ಕರಣಂಗಳನ್ನು ಮಹಾಜ್ಯೋತಿರ್ಮಯಲಿಂಗದತ್ತ ಮುಖಮಾಡಿ ನೋಡಲು ಮಹಾಶರಣಗಣಮಾರ್ಗದ ಬಟ್ಟಬಯಲ ನಿಜಾಚರಣೆ ದೊರೆವುದು ನೋಡ! ಗುಹೇಶ್ವರ ಲಿಂಗದಲ್ಲಿ ಚೆನ್ನಬಸವಣ್ಣ.