ವಚನ - 1524     
 
ಶ್ರೀಗುರುವನರಿಯಲೆ ಬೇಕು, ಶ್ರೀಗುರುವನರಿಯಲೆ ಬೇಕು. ಅಂತಲ್ಲದೆ ಸುಖವಿಲ್ಲಯ್ಯಾ, ಅಂತಲ್ಲದೆ ಸುಖವಿಲ್ಲಯ್ಯಾ. ಶ್ರೀಗುರುವನರಿದಲ್ಲದೆ ಇಹಪರಸುಖವನರಿಯಬಾರದು. ಅಂತಲ್ಲದೆ ಶ್ರೀಗುರುವನು ಅರಿಯದವನೆ ಲಘು. ಶ್ರೀಗುರುವನು ಅರಿದಂಗೆ ಶ್ರೀಗುರು ಗುಹೇಶ್ವರ.