Index   ವಚನ - 14    Search  
 
ಮತ್ತಮಾ ಸಾಧಾರದೀಕ್ಷೆಯು ಸಬೀಜದೀಕ್ಷೆ ನಿರ್ಬೀಜದೀಕ್ಷೆ ಚಿನ್ಮಯ ದೀಕ್ಷೆ ಯೆಂದು ಮೂರು [ಪ್ರಕಾರದವು]. ಅವು ಯಥಾಕ್ರಮದಿಂದ ಕರ್ಮಕಾಂಡ ಭಕ್ತಿ ಕಾಂಡ ಜ್ಞಾನಕಾಂಡಗಳಲ್ಲಿಯ ದೀಕ್ಷೆ ಎನಿಸಿಕೊಂಬವು. ಇಂತೆಂದು ಕಾರಣಾಗಮ ಪೇಳೂದಯ್ಯಾ. ಅವರೊಳು ನಿರ್ಬೀಜದೀಕ್ಷೆ[ಯು ಸದ್ಯೋ ನಿರ್ವಾಣದೀಕ್ಷೆ ಎಂದು] ಚಿರಂ ನಿರ್ವಾಣದೀಕ್ಷೆ ಎಂದು ಎರಡು ಭೇದವು ಪೇಳಲ್ಪಡುತ್ತಿಹುದು. ಅವರೊಳು ಅತ್ಯಂತ ವಿರಕ್ತನಾದ ಶಿಷ್ಯ[ನು] ಅನೇಕ ಭವಂಗಳಲ್ಲಿ ಮಾಡಲ್ಪಟ್ಟ ಸಂಚಿತಕರ್ಮಂಗಳನು, ಮತ್ತಮಾ ಸಂಚಿತಕರ್ಮರಾಶಿಯೊಳಂ ಆಗ ತಾಳ್ದಿರ್ದ ಶರೀರವಿಡಿದು ಅನುಭವಿಸುತ್ತಿರ್ದ ಪ್ರಾರಬು ಕರ್ಮಂಗಳನು, ಮುಂದೆ ಭವಾಂ ತರಂಗಳಲ್ಲಿ ಅನುಭವಿಸಲುಳ್ಳ ಆಗಾಮಿ ಕರ್ಮಂಗಳನು ಶೋಧಿಸಿ ಸದ್ಯೋನ್ಮುಕ್ತಿ ಯನೆಯಿಸುವ ದೀಕ್ಷೆ ಸದ್ಯೋನಿರ್ವಾಣದೀಕ್ಷೆ ಎನಿಸುವದಯ್ಯಾ, ಶಾಂತವೀರ ಪ್ರಭುವೇ.