Index   ವಚನ - 1    Search  
 
ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು. ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮಿಸಬೇಕಲ್ಲದೆ, ಅಂಗ ಮುಂತಾಗಿ ಗಮಿಸಲಾಗದು. ಲಿಂಗಸಂಬಂಧಿಯಾಗಿ ಅಂಗ ಮುಂತಾಗಿಪ್ಪವರು ಲಿಂಗಕ್ಕೆ ದೂರವಯ್ಯಾ, ನಾಗಪ್ರಿಯ ಚೆನ್ನರಾಮೇಶ್ವರಾ.