ವಚನ - 1537     
 
ಸಂಸಾರವೆಂಬ ಶರಧಿ ಅಡ್ಡಗಟ್ಟಲು, ಅನುವನರಿದವಂಗೆ ಅಂಗವೆ ಹಡಗು, ಮನವೆ ಕೂಕಂಬಿಕಾರ. ಜ್ಞಾನ -ಸುಜ್ಞಾನವೆಂಬ ಗಾಳಿ ತೀಡಲು, ಸುಲಕ್ಷಣದಿಂದ ಸಂಚರಿಸುತ್ತಿರಲು ಬರ್ಪವು ಮೀನು, ಮೊಸಳೆ, ಅಷ್ಟಗಿರಿ-ಜತನ. ಮೊತ್ತದ ಸಂಚಾರದ ಹಡಗು ತಾಗುತ್ತಿದೆ, ಎಚ್ಚತ್ತಿರು, ಜಾಗ್ರ ಸ್ವಪ್ನ ಸುಷುಪ್ತಿಗಳಲ್ಲಿ ಮೈಮರೆಯದೆ. ಕತ್ತಲೆ ದೆಸೆ ಅತ್ತಲೆ ಪೋಗು; ಉತ್ತರನಕ್ಷತ್ರದ ಪ್ರಭೆಯಿದೆ! ಸೆಟ್ಟಿ ಜತನ! ಪಟ್ಟಣವಿದೆ, ಗುಹೇಶ್ವರಾ.