Index   ವಚನ - 16    Search  
 
ವಟವೃಕ್ಷದ ಘಟದ ಮಧ್ಯದಲ್ಲಿ ಒಂದು ಮಠವಿಪ್ಪುದು. ಆ ಮಠಕ್ಕೆ ಹಿಂದೆಸೆಯಿಂದ ಬಂದು, ಮುಂದಳ ಬಾಗಿಲ ತೆಗೆದು, ವಿಚ್ಛಂದದ ಕೋಣೆಯ ಕಂಡು, ಕಿಡಿ ನಂದದೆ ದೀಪವ ಕೊಂಡು ಹೊಕ್ಕು,ನಿಜದಂಗದ ಓಗರದ ಕುಂಭವ ಕಂಡು, ಬಂಧವಿಲ್ಲದ ಓಗರವನುಂಡು, ಸದಮಲಲಿಂಗವೆ ತಾನಾದ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವಾದ.