Index   ವಚನ - 154    Search  
 
ತನು ನಿಮ್ಮ ಪೂಜಿಸುವ ಕೃಪೆಗೆ ಸಂದುದು. ಮನ ನಿಮ್ಮ ನೆನೆವ ಧ್ಯಾನಕ್ಕೆ ಸಂದುದು. ಪ್ರಾಣ ನಿಮ್ಮ ನೆರೆವ ರತಿಸುಖಕ್ಕೆ ಸಂದುದು. ಇಂತು, ತನು ಮನ ಪ್ರಾಣ ನಿಮಗೆ ಸಂದಿಪ್ಪ ನಿಸ್ಸಂಗಿಯಾದ ನಿಚ್ಚಟ, ನಿಜಲಿಂಗೈಕ್ಯ ಕಾಣಾ ಗುಹೇಶ್ವರಾ.