ವಚನ - 1540     
 
ಸಜ್ಜನಸನ್ನಿಹಿತವಾದ ಭಕ್ತಿ, ಹೊತ್ತಿಗೊಂದು ಪರಿಯುಂಟೆ ಹೇಳಾ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ, ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.