Index   ವಚನ - 59    Search  
 
ಧರೆ ಆಕಾಶವಿಲ್ಲದಿರೆ, ಆಡುವ ಘಟಪಟ, ಚರಸ್ಥಾವರ, ಆಡುವ ಚೇತನಾದಿಗಳಿರಬಲ್ಲವೆ? ವಸ್ತುವಿನ ಸಾಕಾರವೆ ಭೂಮಿಯಾಗಿ, ಆ ವಸ್ತುವಿನ ಆಕಾಶವೆ ಶಲಾಕೆ ರೂಪಾಗಿ, ಸಂಘಟಿಸಲಾಗಿ ಜೀವಕಾಯವಾಯಿತ್ತು. ಇಂತೀ ರೂಪಿಂಗೆ ರೂಪುಪೂಜೆ, ಅರಿವಿಂಗೆ ಜ್ಞಾನಪೂಜೆ. ಉಭಯವು ನಿಂದಲ್ಲಿ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗ, ಏನೂ ಎನಲಿಲ್ಲ.