Index   ವಚನ - 91    Search  
 
ಅರ್ಥಪ್ರಾಣವ ಕೊಟ್ಟಲ್ಲಿ, ಅಪಮಾನಕ್ಕೆ ಮುಚ್ಚಳನಿಕ್ಕುವ ಲೆಂಕನುಂಟೆ ಅಯ್ಯಾ? ತಲೆಯ ಮಾರಿದವಂಗೆ ಕಣ್ಣು ಹೊರಗಾದುದುಂಟೆ? ಭಕ್ತನಾದಲ್ಲಿ ಸತ್ಯ ಬೇಕಾದಡೆ, ಅರ್ಥ ಪ್ರಾಣ ಅಪಮಾನಕ್ಕೆ ಹೊರಗಾಗಬೇಕು. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವನರಿವುದಕ್ಕೆ.