ವಚನ - 1553     
 
ಸಹಜದಿಂದ ನಿರಾಲಂಬವಾಯಿತ್ತು, ನಿರಾಲಂಬದಿಂದ ನಿರಾಳವಾಯಿತ್ತು. ನಿರಾಳದಿಂದ ನಿರವಯವಾಯಿತ್ತು, ನಿರವಯದಿಂದ ಆದಿಯಾಗಿತ್ತು. ಆದಿಯಲ್ಲಿ ಮೂರ್ತಿಯಾದನೊಬ್ಬ ಶರಣ. ಆ ಶರಣನ ಮೂರ್ತಿಯಿಂದ ಸದಾಶಿವನಾದ, ಆ ಸದಾಶಿವನ ಮೂರ್ತಿಯಿಂದ ಶಿವನಾದ, ಆ ಶಿವನ ಮೂರ್ತಿಯಿಂದ ರುದ್ರನಾದ, ಆ ರುದ್ರನ ಮೂರ್ತಿಯಿಂದ ವಿಷ್ಣುವಾದ. ಆ ವಿಷ್ಣುವಿನ ಮೂರ್ತಿಯಿಂದ ಬ್ರಹ್ಮನಾದ. ಆ ಬ್ರಹ್ಮನ ಮೂರ್ತಿಯಿಂದಾದವು ಸಕಲ ಜಗತ್ತುಗಳೆಲ್ಲಾ- ಇವರೆಲ್ಲ ನಮ್ಮ ಗುಹೇಶ್ವರನ ಕರಸ್ಥಲದ ಹಂಗಿನಲ್ಲಿ ಹುಟ್ಟಿ ಬೆಳೆದರು.