ವಚನ - 1560     
 
ಸಿಡಿಲೊಡನೆ ಕಾದುವಂಗೆ ಕೊಡೆಯೊಂದು ಮರೆಯೆ? ಪರ್ವತವ ಹೊರುವಂಗೆ ಸಿಂಬಿಯೊಂದು ಸಹಾಯವೆ? ಸಕ್ಕರೆಯ ಸವಿವುದಕ್ಕೆ ಬೇರೊಂದು ಪದಾರ್ಥವೆ? ಗುಹೇಶ್ವರನ ಅರಿವುದಕ್ಕೆ ಕುರುಹು ಮುನ್ನೇಕೆ?