Index   ವಚನ - 111    Search  
 
ಶೀಲವಂತನಾದಡೆ ತಾ ಸವೆದು ಶೀಲವ ಮಾಡಬೇಕಲ್ಲದೆ ತಾನಿದೆಡೆಯಲ್ಲಿ ಸುಳಿದು ಮಾಡುವ ಶೀಲ, ಕೊಟ್ಟು ಪೂಜಿಸುವ ಕೈಕೂಲಿ ತನಗಿಲ್ಲ. ಪೂಜೆಯ ಫಲವು ಕೊಡವಾಲ ಕರೆವ ಸುರಭಿಯಂತೆ ಅಟ್ಟಿದರಟ್ಟು ವರವ ಬೇಡಿ ಮರುಗುವ ದಾಸಿಯ ಪಥದಂತೆ, ತನ್ನ ಉದರನಿಮಿತ್ತ್ಯವಿಡಿದು, ನೇಮ ಬೇಕೆಂಬ ದುಶ್ಶೀಲರ ಮೆಚ್ಚ, ಸಕಳೇಶ್ವರದೇವನು.