Index   ವಚನ - 1    Search  
 
ಅಂಗದ ಕಳೆ ಲಿಂಗದಲ್ಲಿ ಲೀಯವಾಗದು. ಲಿಂಗದ ಕಳೆ ಅಂಗದಲ್ಲಿ ಲೀಯವಾಗದು. ಮಾತಿನಮಾಲೆಯ ಬೊಮ್ಮವೇತರದೊ? ಕಾಯ ಭಕ್ತನಾದರೆ ಭೃತ್ಯಾಚಾರವಿರಬೇಕು. ಪ್ರಾಣ ಜಂಗಮವಾದಡೆ ಅರಿದಿರಬೇಕು. ಇಂತು ಭಕ್ತಿಜ್ಞಾನವುಳ್ಳವರಲ್ಲದೆ ಭಕ್ತರಲ್ಲ, ಶರಣರಲ್ಲ. ಹಿರಿಯರು ಬಂದಡೆ ಇದಿರೆದ್ದು ಬಾರದವರ ಮನೆಗೆ ಅಡಿಯ ಇಡೆವೆಂದು, ಬಸವಪ್ರಿಯ ಕೂಡಲಚನ್ನಸಂಗನ ಶರಣರು ಕಾಡಿಹರು ಕಾಣಾ, ಸಂಗನಬಸವಣ್ಣಾ.