Index   ವಚನ - 22    Search  
 
ಉದಯಕಾಲ ಮಧ್ಯಾಹ್ನಕಾಲ ಅಸ್ತಮಯಕಾಲದಲ್ಲಿ, ತನ್ನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವಾತನೆ ಸದ್ಭಕ್ತನು. ಇಂತೀ ತ್ರಿಕಾಲದಲ್ಲಿ ಲಿಂಗಾರ್ಚನೆಯ ಮಾಡುವಲ್ಲಿ, ಹಿಂದಣ ಕ್ರೀಯಿಂದ ಮಾಡಬೇಕು. ಅಂತಲ್ಲದೆ ಸುಮ್ಮನೆ ಲಿಂಗಾರ್ಚನೆಯ ಮಾಡುವಾತ, ಭಕ್ತನಲ್ಲ, ಮಾಹೇಶ್ವರನಲ್ಲ, ಪ್ರಸಾದಿಯಲ್ಲ, ಪ್ರಾಣಲಿಂಗಿಯಲ್ಲ, ಶರಣನಲ್ಲ, ಐಕ್ಯನಲ್ಲ. ಅವನು ಶ್ರೀಗುರುವಿನಾಜ್ಞೆಯ ಮೀರಿದವನು, ಪಂಚಮಹಾಪಾತಕನು, ಲಿಂಗಚೋರಕನು. ಇದನರಿದು ತ್ರಿಸಂಧ್ಯಾಕಾಲದಲ್ಲಿ ತನ್ನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಹಿಂದಣ ಕ್ರೀವಿಡಿದು ಮಾಡುವ ಸದ್ಭಕ್ತಂಗೆ ನಮೋ ನಮೋ ಎನುತಿರ್ದೆನಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.