Index   ವಚನ - 44    Search  
 
ದೇವ ದೇವ ಮಹಾಪ್ರಸಾದ: ನಿಮ್ಮ ಶರಣರ ಮನೆಗೆ ಸಲುಗೆಯ ಬಂಟ ನಾನಲ್ಲಯ್ಯಾ. ತನುಮನಧನವ ಹಿಂದಿಕ್ಕಿಕೊಂಡಿಪ್ಪ ವಂಚಕ ನಾನಯ್ಯಾ. ನಿಮ್ಮ ಶರಣರು ಎನ್ನಿಚ್ಛೆಗೆ ಬಪ್ಪರೆ? `ಚಕಿತಮಭಿದತ್ತೇ ಶ್ರುತಿರಪಿ' ಎನಲು, ಎನ್ನ ನುಡಿ ನಿಮ್ಮ ಶರಣರ ತಾಗಬಲ್ಲುದೆ? ಹಣೆಯ ಹೊಣೆಯ ತೋರಿ ಉದರವ ಹೊರೆವಂತೆ, ನಿಮ್ಮ ಮರೆಯಲಡಗಿರ್ಪ ಹಡಪಿಗ ನಾನಯ್ಯಾ. ಬಸವಪ್ರಿಯ ಕೂಡಲಚೆನ್ನಸಂಗನ ಶರಣರು ಎನ್ನ ಮಾತಿಗೆ ಬಾರರು, ನೀವೆ ಹೋಗಿ ಬಿಜಯಂಗೈಸಿಕೊಂಡು ಬಾರಾ, ಸಂಗನಬಸವಣ್ಣಾ.