Index   ವಚನ - 54    Search  
 
ಪಾರದ್ವಾರವ ಮಾಡಬಂದವ ಅಬೆಯ ಗಂಡಗೆ ಕೂಪನೆ? ಅವಳು ತನ್ನ ಪತಿಗೆ ಓಪಳೆ? ಈ ಉಭಯದ ಮಾರ್ಗ ಅರಿವ ಅರಿವಿಂಗೆ, ಹೇಸಿ ತಿಂಬ ಕರಣಕ್ಕೆ ಒಡಗೂಡಿದ ಸ್ನೇಹವುಂಟೆ? ಇದನರಿ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವನರಿವುದಕ್ಕೆ.