ಬಂಗಾರವನೊರೆದು ಬಣ್ಣವ ಕಾಣಬೇಕಲ್ಲದೆ,
ಬಣ್ಣವನೊರೆದು ಬಂಗಾರದ ಇರವನರಿಯಬಹುದೆ?
ಜೀವವರಿದು ಜ್ಞಾನವ ಕಾಣಬೇಕಲ್ಲದೆ
ಜೀವವಳಿದು ಜ್ಞಾನಕ್ಕೆ ಉಳಿವುಂಟೆ?
ಅದು ಜ್ಯೋತಿಯ ಮೇಲಣ ತಮವದೆ,
ಕೆಳಗೆ ಬೆಳಗು, ತುದಿಯಲ್ಲಿ ಸಮವದೆ ತಿಳಿದು ನೋಡಿ.
ಆ ಪರಿಯ ಇರವು ಜೀವಪರಮನ ಕಲೆ,
ಸಗರದ ಬೊಮ್ಮನೊಡೆಯ
ತನುಮನ ಸಂಗಮೇಶ್ವರಲಿಂಗಾ.