ವಚನ - 1580     
 
ಹಗಲಿರುಳೆನ್ನದೆ ಹಸಿವ ಕಳೆದು, ನಿಜದಲ್ಲಿ ಒರಗಿ ನಿದ್ರೆಯ ಕಳೆದು, ನೋಡಿ ನೋಡಿ ಸುಖಂಬಡೆದೆನಯ್ಯಾ. ಗುಹೇಶ್ವರಯ್ಯಾ ನಿಮ್ಮ ವಿರಹದಲ್ಲಿ, ಕಂಗಳೆ ಕರುವಾಗಿದ್ದೆನಯ್ಯಾ.