Index   ವಚನ - 76    Search  
 
ವಿಷ ಕೊಲುವಲ್ಲಿ, ಹಾವೇನ ಮಾಡುವುದು? ಉಂಬ ಅಶನ ನಂಜಾಗಿಹಲ್ಲಿ, ಇಕ್ಕಿದವಳಿಗೆ ಅಂಜಿಕೆಯುಂಟೆ? ತನ್ನ ಇಂದ್ರಿಯ ತನ್ನ ತಿಂಬಲ್ಲಿ, ವಸ್ತುವಿನ ಮೇಲೆ ಹಂಗ ಹಾಕುವ ಭಂಡರಿಗೆ ಇಲ್ಲಾಯೆಂದೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು.