Index   ವಚನ - 1582    Search  
 
ಹಠಯೋಗ ಲಂಬಿಕೆಯೆಂದು ಆಕುಂಚನವೆಂದು ವಜ್ರ ಅಮರಿಯ ಕಲ್ಪವೆಂದು ಮಲಮೂತ್ರಂಗಳ ಸೇವಿಸುತ್ತ ಇದು ಪೂರ್ವ ನವನಾಥಸಿದ್ಧರ ಮತೋಕ್ತವೆಂದು ಕಾಪಾಲಿಕಾಚರಣೆಯ ಆಚರಿಸುವವರಲ್ಲ ಶರಣರು. ಮೇಣು, ತಲೆಯೊಳಗಣ ವಾತ ಪಿತ್ಥ ಶ್ಲೇಷ್ಮವ ತೆಗೆದು ಅಮೃತವೆಂದು ಬಿನುಗು ದೃಷ್ಟವ ತೋರುವರಲ್ಲ ಶರಣರು. ದ್ರವಿಸುವ ದೇಹದಲ್ಲಿ ಅಪ್ಪುವಿನ ಫಲರಸಕ್ಷೀರ ಘೃತ ಮೊದಲಾದವ ಸೇವಿಸುತ್ತ, ಅನ್ನವ ಬಿಟ್ಟೆವೆಂಬ ಭೂತಚೇಷ್ಟಕರಲ್ಲ ಶರಣರು. ಇಂತಿವೆಲ್ಲವು ಕಾಕು ಸಟೆ ಭ್ರಾಂತೆಂದು ತಿಳಿದು, ನಿರ್ಧರ ನಿಜದಿ ನಿಂದರು, ಗುಹೇಶ್ವರಾ ನಿಮ್ಮ ಶರಣರು ಅಗ್ರಗಣ್ಯರು.