Index   ವಚನ - 57    Search  
 
ತರುಗಿಡು ಗುಣನಾಮವಾದಡೇನು, ಸ್ಥಾಣುವಿನ ಒಲವರದ ತೆರ ಬೇರೆ. ದರ್ಶನ ಸುಖಸಂಪತ್ತಾದಡೇನು, ಅರಿವಿನ ಒಲವರದ ತೆರ ಬೇರೆ. ಎಲೆಯ ಹಾಕಿ ತನ್ನಲ್ಲಿಗೆ ಕರೆವವನ ಗುಣ ಲೇಸೆ? ಶಬರನ ವೇಷ, ಮೃಗದ ಹರಣದ ಕೇಡು. ಹಿರಿಯತನವ ತೋರಿ, ತ್ರಿವಿಧವ ಬೇಡುವ ಅಡಿಗರಿಗೇಕೆ, ಬಂಕೇಶ್ವರಲಿಂಗವ ಅರಿದ ಅರಿವು?