Index   ವಚನ - 1592    Search  
 
ಹಸಿವುಳ್ಳನ್ನಕ್ಕ ವ್ಯಾಪಾರ ಬಿಡದು, ಸೀತ ಉಳ್ಳನ್ನಕ್ಕ ಉಪಾಧಿಕೆ ಬಿಡದು, ಮಾತುಳ್ಳನ್ನಕ್ಕ ಬೂಟಾಟಿಕೆ ಬಿಡದು, ನಿದ್ರೆಯುಳ್ಳನ್ನಕ್ಕ ಸತಿಯ ಸಂಗ ಬಿಡದು. ಇದು ಕಾರಣ- ಕ್ಷುತ್ತಿಂಗೆ ಭಿಕ್ಷೆ, ಸೀತಕ್ಕೆ ರಗಟೆ, ಮಾತಿಂಗೆ ಮಂತ್ರ, ಶಯನಕ್ಕೆ ಶಿವಧ್ಯಾನವೆಂದು ಹೇಳಿಕೊಟ್ಟ ಗುರುವಚನವ ಮೀರಿ ನಡೆವವರಿಗೆ ಪರದಲ್ಲಿ ಪರಿಣಾಮ ದೊರೆಕೊಳ್ಳದು ನೋಡಾ. ಇದು ಕಾರಣ, ಗುರುವಾಜ್ಞೆಯ ಮೀರಿ ಮನಕ್ಕೆ ಬಂದಂತೆ ನಡೆವವರ ಎನಗೊಮ್ಮೆ ತೋರದಿರಾ ಗುಹೇಶ್ವರಾ.