Index   ವಚನ - 81    Search  
 
ಭವಿಸಂಗವನೊಲ್ಲೆನೆಂದು, ಭವಿಗಳ ಮನೆಯಲ್ಲಿ ಉಣ್ಣೆನೆಂದು, ಭವಿಗಳಿಗೆ ಇಕ್ಕೆನೆಂದು, ಭವಿಪಾಕದ ಕ್ಷಾರ ಕ್ರಮುಕ ಮಧುರ ತಿಲ ಚೂರ್ಣ ಇವು ಮೊದಲಾದ ದ್ರವ್ಯಂಗಳ ಭಕ್ಷಿಸಿ, ಪ್ರೇತರ ಕೂಟವನೊಲ್ಲೆನೆಂಬ, ಜಗನೀತಿಯ ವರ್ತಕರುಗಳಿಗೆ ಅದೇತರ ಶೀಲ, ಬಂಕೇಶ್ವರಲಿಂಗದಲ್ಲಿ?