ವಚನ - 1593     
 
ಹಾಸುಹೊಕ್ಕಿನ ಠಾವ ದಾಸಯ್ಯ ಬಲ್ಲ. ಉಂಬ ಊಡುವ ಠಾವ ಸಿರಿಯಾಳ ಬಲ್ಲ. ಕೊಂಬ ಕೊಡುವ ಠಾವ ಬಲ್ಲಾಳ ಬಲ್ಲ. ಲಿಂಗ ಜಂಗಮದ ಠಾವ ಬಸವಣ್ಣ ಬಲ್ಲ. ರುಚಿಯ ಠಾವ ಬಂಕಯ್ಯ ಬಲ್ಲ. ನಮ್ಮ ಗುಹೇಶ್ವರನ ನಿಲವ, ಸೊನ್ನಲಿಗೆಯ ಸಿದ್ಧರಾಮಯ್ಯನೆ ಬಲ್ಲ.