ವಚನ - 1596     
 
ಹಿಂದೆನ್ನ ಗುರು ಅನಿಮಿಷಂಗೆ ಲಿಂಗವ ಕೊಟ್ಟೆನೆಂಬ ಸೂತಕ ಬೇಡ. ಅಂದು ಅನಿಮಿಷನು ನಿನ್ನ ಕೈಯಲ್ಲಿದ್ದುದ ತೆಕ್ಕೊಂಡನೆಂಬ ಸಂಕಲ್ಪ ಬೇಡ. ಹಿಂದು ಮುಂದೆಂಬ ಸಂದಳಿದು, ನಿಜದಲ್ಲಿ ಭರಿತನಾದ ಬಳಿಕ, ಕೊಡಲುಂಟೆ ಕೊಳಲುಂಟೆ ಹೇಳಾ? ಹಿಡಿವಡೆ ಸಿಕ್ಕದು, ಕೊಡುವಡೆ ಹೋಗದು, ಎಡೆಯಾಟ ವ್ಯವಹಾರಕ್ಕೆ ಬಾರದು ನೋಡಾ. ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಯಿತ್ತು ನಿನಗೆ. ಗುಹೇಶ್ವರನೆಂಬ ಲಿಂಗವ ನಿನಗಿನ್ನು ಹೊಸದಾಗಿ ಕೊಡಲುಂಟೆ ಹೇಳಾ ಸಂಗನಬಸವಣ್ಣಾ?