Index   ವಚನ - 2    Search  
 
ಅಂಗ ಲಿಂಗಕ್ಕೆ ಗೂಡಾಯಿತ್ತು, ಲಿಂಗ ಅಂಗಕ್ಕೆ ಗೂಡಾಯಿತ್ತು. ಅಂಗಲಿಂಗಸಂಗವೆಂಬ ಸಂದಳಿದು ನಿಜಲಿಂಗೈಕ್ಯವಾಯಿತ್ತು. ಭಾವ ನಿರ್ಭಾವ ನಿಷ್ಪತ್ತಿಯಲ್ಲಿ, ಮಹಾದಾನಿ ಸೊಡ್ಡಳಂಗೆ ಸರ್ವನಿರ್ವಾಣವಾಯಿತ್ತು.