ವಚನ - 1597     
 
ಹಿರಿದೊಂದು ಮಾರಿಮಸಣಿಯ ಕೈಯಿಲ್ಲದ ಮೋಟ ಹಿಡಿದನು. ಉಲಿವ ಕಮಲದಲುದಕವಿರ್ದುದು, ಕುಡಿವವರಿಲ್ಲದೆ ಬತ್ತಿ ಹೋಯಿತು. ನರರು ಸುರರು ಅಧಿದೇವತೆಗಳು, ಕುಲವನರಸುತ ಕೂಗುತೈದಾರೆ. ತನ್ನ ಸುಳುಹಿಗೆ ತನ್ನ ನಿಲುವಿಗೆ, ತಾನೆ ಬೆರಗಾದನು ಗುಹೇಶ್ವರ!