ಕಾಶಿಯಲ್ಲಿಪ್ಪ ಈಶನನರಿಯದ ಮೂವರ
ಕೊರಳು ಕೈಗಳು ಮುರಿದು ಬಿದ್ದವು.
ಕೈಲಾಸದಲ್ಲಿಪ್ಪ ಈಶನನರಿಯದ ಮೂವರ
ದೇಹ ಕಾಲು ಕೈಗಳು ಮುರಿದುಬಿದ್ದವು.
ಶ್ರೀಶೈಲದಲ್ಲಿಪ್ಪ ಈಶನನರಿಯದ ಮೂವರ
ದೇಹ ಕರುಳು ತೊಗಲುಗಳು ಉದುರಿಬಿದ್ದವು.
ಸಮುದ್ರದಲ್ಲಿಪ್ಪ ಈಶನನರಿಯದಿಬ್ಬರು
ಒಬ್ಬರ ಹೊಟ್ಟೆಯ ಒಬ್ಬರು ಹೊಕ್ಕು ಬಿದ್ದರು.
ಇಂತೀ ದೇವ ದಾನವ ಮಾನವರು ಮೊದಲಾದ ಸಕಲರೂ
ಮಹಾದಾನಿ ಸೊಡ್ಡಳನನರಿಯದೆ ತರ್ಕಿಸಿ, ಕೆಟ್ಟುಹೋದರು.