Index   ವಚನ - 86    Search  
 
ವೇದದವರನೊಲ್ಲದೆ ನಮ್ಮ ಮಾದಾರ ಚನ್ನಯ್ಯಂಗೊಲಿದ. ಶಾಸ್ತ್ರದವರನೊಲ್ಲದೆ ಶಿವರಾತ್ರಿಯ ಸಂಕಣ್ಣಂಗೊಲಿದ. ಆಗಮದವರನೊಲ್ಲದೆ ತೆಲುಗುಜೊಮ್ಮಯ್ಯಂಗೊಲಿದ. ಪುರಾಣಕರ್ಮಿಗಳೆಂಬ ವಿಶಿಷ್ಟಬ್ರಹ್ಮರನೊಲ್ಲದೆ ಉದ್ಭಟಯ್ಯಂಗೊಲಿದ. ಅಣ್ಣ ಕೇಳಾ ಸೋಜಿಗವ! ದಾಸದುಗ್ಗಳೆಯರಿಗೊಲಿದ ಮುಕ್ಕಣ್ಣ ಸೊಡ್ಡಳ, ಹಾರುವಣ್ಣಗಳಿಗೆ ಹೇಸಿ ಕದವನಿಕ್ಕಿಕೊಂಡನು.