Index   ವಚನ - 105    Search  
 
ಹಿಡಿದು ಬಿಟ್ಟ ಬಳಿಕ ಅಂತಿರಬೇಕಲ್ಲದೆ, ಇನ್ನು ಹಿಡಿದು ತಪ್ಪಿದ ವಸ್ತುವ ಅರಸಿ ಹಿಡಿಯಲುಂಟೆ? ಮುನಿದು ಹಾವಿನೊಳಿಟ್ಟು ಒಸೆದು ಆನೆಯನೇರಿಸಿಹೆನೆಂದಡೆ, ಶಿವಶರಣರ ಮುನಿಸು ತಿಳಿಯದು ನೋಡಾ. ಒಡೆದ ಮುತ್ತು ನಾಣ್ಯಕ್ಕೆ ಸಲ್ಲದು, ಒಡೆದ ಹಾಲು ಅಮೃತಕ್ಕೆ ಸಲ್ಲದು. ನಾವೇತಕಯ್ಯಾ, ನಿನಗಂದು ಸೊಡ್ಡಳನ ಶರಣರು ನಿರೂಪವ ಕೊಡಲು, ಎನ್ನ ಪರಮಾರಾಧ್ಯರು ಸಂಗನಬಸವಣ್ಣನ ತಿಳುಹುತಿರ್ದರು.