Index   ವಚನ - 31    Search  
 
ಅಯ್ಯಾ ನಿಮ್ಮ ಶರಣರು ವೇಷವ ತೋರಿ ಗ್ರಾಸವ ಬೇಡುವರಲ್ಲ. ದೇಶವ ತಿರುಗಿ ಕಲಿತಮಾತ ನುಡಿವರಲ್ಲ. ಲೇಸಾಗಿ ನುಡಿವರು, ಆಶೆ ಇಲ್ಲದೆ ನಡೆವರು, ರೋಷವಿಲ್ಲದೆ ನುಡಿವರು. ಹರುಷವಿಲ್ಲದೆ ಕೇಳುವರು, ವಿರಸವಿಲ್ಲದೆ ಮುಟ್ಟುವರು. ಸರಸವಿದ್ದಲ್ಲಿಯೇ ವಾಸಿಸುವರು. ಇಂತಪ್ಪ ಬೆರಸಿ ಬೇರಿಲ್ಲದ ನಿಜೈಕ್ಯಂಗೆ ನಮೋ ನಮೋ ಎಂಬೆ, ಬಸವಪ್ರಿಯ ಕೂಡಲಚೆನ್ನಬಸವಣ್ಣ. ಇಂತಪ್ಪ ಶರಣರ ನೆಲೆಯ ನಾನೆತ್ತ ಬಲ್ಲೆನಯ್ಯಾ?