ವಚನ - 1612     
 
ಹೊರವೇಷದ ವಿಭೂತಿ ರುದ್ರಾಕ್ಷಿಯನು ಧರಿಸಿಕೊಂಡು, ವೇದ ಶಾಸ್ತ್ರ ಪುರಾಣ ಆಗಮದ ಬಹುಪಾಠಿಗಳು ಅನ್ನ ಹೊನ್ನು ವಸ್ತ್ರವ ಕೊಡುವವನ ಬಾಗಿಲ ಕಾಯುವ ಮಣ್ಣ ಪುತ್ಥಳಿಯಂತಹ ನಿತ್ಯನಿಯಮದ ಹಿರಿಯರುಗಳು. ಅದೆಂತೆಂದಡೆ: ``ವೇದವೃದ್ಧಾ ಅಯೋವೃದ್ಧಾಃ ಶಾಸ್ತ್ರವೃದ್ಧಾ ಬಹುಶ್ರುತಾಃ | ಇತ್ಯೇತೇ ಧನವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ || ಎಂದುದಾಗಿ ಎಲ್ಲ ಹಿರಿಯರು ಲಕ್ಷ್ಮಿಯ ದ್ವಾರಪಾಲಕರು ಗುಹೇಶ್ವರಾ.