Index   ವಚನ - 68    Search  
 
ಈ ಬಚ್ಚಬರಿಯ ಬಯಲ ಕಂಡಿಹೆನೆಂದರೆ, ಕಾಣಬಾರದು. ಕೇಳಿಹೆನೆಂದರೆ ಕೇಳಬಾರದು, ಹೇಳಿಹೆನೆಂದರೆ ಹೇಳಬಾರದು. ಇವ ಮೂರರ ಕಾಳಿಕೆಯ ಕಳೆದು, ಈ ಹನ್ನೆರಡ ಜಾಣಿಯಲ್ಲಿ ದಾಂಟಿ, ಒಂದರ ಮೇಲೆ ನಿಂದು, ಅಂದವಳಿಯದೆ, ಬಿಂದು ತುಳುಕದೆ, ಅಂದಂದಿನ ಹೊಸಪೂಜೆಯ ನೋಡಿ, ಕಣ್ದೆರೆದು ಕರಗಿ ಒಂದಾದ ಶರಣರ ಚರಣವ ತೋರಿ ಬದುಕಿಸಯ್ಯಾ ಎನ್ನ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.