Index   ವಚನ - 143    Search  
 
ನಿತ್ಯ ಅನಿತ್ಯವೆಂಬುದ ತೋರಿದಿರಿ, ಸತ್ಯ ಅಸತ್ಯವೆಂಬುದ ತೋರಿದಿರಿ. ಆಚಾರ ವಿಚಾರವೆಂಬುದ ತೋರಿದಿರಿ. ಅಯ್ಯಾ ಸೋಹಂ ದಾಸೋಹಂ ಎಂಬುದ ತೋರಿದಿರಿ. ಇದು ಎಂಬುದ ತೋರಿದಿರಿ. ಅಯ್ಯಾ ಮುಕ್ತಿ ಎಂಬುದ ತೋರಿದಿರಿ. ಅಂಗ ಲಿಂಗವೆಂಬುದ ತೋರಿದಿರಿ, ಪ್ರಾಣವೇ ಜಂಗಮವೆಂಬುದ ತೋರಿದಿರಿ. ಪ್ರಸಾದವೇ ಪರವೆಂದು ತೋರಿದಿರಿ. ಇಂತಿವರ ಭೇದಾದಿ ಭೇದವನೆಲ್ಲ ತೋರಿದಿರಿ. ನಿಮ್ಮ ಹಾದಿಯ ಹತ್ತಿಸಿದಿರಿ. ಮೂದೇವರೊಡೆಯ ಚೆನ್ನಮಲ್ಲೇಶ್ವರಾ, ನಿಮ್ಮ ಹಾದಿಗೊಂಡು ಹೋಗುತ್ತಿರ್ದು, ನಾನೆತ್ತ ಹೋದೆನೆಂದರಿಯನಯ್ಯಾ. ಬಸವಪ್ರಿಯ ಕೂಡಲಚೆನ್ನಬಸವಣ್ಣಾ , ನಾ ಹೋದ ಹಾದಿಯ ನೀವೆ ಬಲ್ಲಿರಿ.